* ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿ ವಿ ಸೋಮನಾಥನ್ ಆಗಸ್ಟ್ 30 ರಿಂದ ಎರಡು ವರ್ಷಗಳ ಅವಧಿಗೆ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. * 05 ವರ್ಷಗಳಿಂದಲೂ ರಾಜೀವ್‌ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ತಮಿಳುನಾಡು ಕೇಡರ್‌ನ 1987-ಬ್ಯಾಚ್ ಐಎಎಸ್ ಅಧಿಕಾರಿ ಸೋಮನಾಥನ್ ಅವರನ್ನು ನೇಮಕ ಮಾಡಲಾಗಿದೆ. * ಸೋಮನಾಥನ್ ಅವರು ಪ್ರಸ್ತುತ ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. * ರಾಜೀವ್ ಗೌಬಾ ಅವರು ಆಗಸ್ಟ್ 30, 2019 ರಿಂದ ಐದು ವರ್ಷಗಳ ಕಾಲ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.