* ಕರ್ನಾಟಕ ಸಹಿತ ಆರು ರಾಜ್ಯಗಳಲ್ಲಿ ವ್ಯಾಪಿಸಿರುವ 56,826 ಚ.ಕಿ.ಮೀ ಪ್ರದೇಶವನ್ನು ಪ್ರಾಕೃತಿಕವಾಗಿ ಸೂಕ್ಶ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಜುಲೈ 31 ರಂದು ಐದನೇ ಕರಡು ಅಧಿಸೂಚನೆ ಹೊರಡಿಸಿದೆ. * ಕೇರಳದ ವೈನಾಡು ಜಿಲ್ಲೆಯ ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.* ಮಹಾರಾಷ್ಟ್ರ,ಗುಜರಾತ,ಕೇರಳ, ಕರ್ನಾಟಕ, ಗೋವಾ, ತಮಿಳನಾಡು ರಾಜ್ಯಗಳಲ್ಲಿ ಹರಡಿಕೊಂಡಿರುವ  6 ರಾಜ್ಯಗಳಲ್ಲಿ ಹರಡಿಕೊಂಡಿರುವ ಪಶ್ಚಿಮ ಘಟ್ಟದ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಪರಿಣತರಿಂದ ಸಲಹೆ ಮತ್ತು ವಿರೋಧಗಳಿದ್ದರೆ 60 ದಿನದೊಳಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.* ಭೂಕುಸಿತ ಪೀಡಿತ ವಯನಾಡು ಜಿಲ್ಲೆಯ ಎರಡು ತಾಲೂಕುಗಳ 13 ಗ್ರಾಮಗಳು ಸೇರಿ ಕೇರಳದ 9,993.7 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸುವ ವಿಚಾರವನ್ನು ಕರಡು ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿದೆ.* ಈ ಅಧಿಸೂಚನೆಯು ಗುಜರಾತ್‌ನಲ್ಲಿ 449 ಚ.ಕಿ.ಮೀ, ಮಹಾರಾಷ್ಟ್ರದಲ್ಲಿ 17,340 ಚ.ಕಿ.ಮೀ, ಗೋವಾದಲ್ಲಿ 1,461 ಚ.ಕಿ.ಮೀ, ಕರ್ನಾಟಕದಲ್ಲಿ 20,668 ಚ.ಕಿ.ಮೀ, ತಮಿಳುನಾಡಿನಲ್ಲಿ 6,914 ಚ.ಕಿ.ಮೀ ಮತ್ತು ಕೇರಳದಲ್ಲಿ 9,993.7 ಚ.ಕಿ.ಮೀ ಪ್ರಸ್ತಾವಿತ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋ‍ಷಿಸಬೇಕು ಎಂಬ ಪ್ರಸ್ತಾವನೆಯನ್ನು ಒಳಗೊಂಡಿದೆ.* ಪಶ್ಚಿಮ ಘಟ್ಟಗಳಲ್ಲಿನ ಅಪರೂಪದ ಜೀವ ವೈವಿಧ್ಯ, ನದಿಗಳು, ನೈಸರ್ಗಿಕ ಸಂಪತ್ತು, ಅಪಾರ ಸಸ್ಯ ಮತ್ತು ಪ್ರಾಣಿ ಸಂಪತ್ತನ್ನು ಉಳಿಸುವ ಉದ್ದೇಶದಿಂದ 59,940 ಚ. ಕಿ. ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಂರಕ್ಷಿಸಬೇಕು ಎಂದು ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು 2013ರಲ್ಲಿ ವರದಿ ಸಲ್ಲಿಸಿತ್ತು.