* ಬಿಹಾರದ ಮಾಜಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.* ಕೇರಳದ ರಾಜ್ಯಪಾಲರಾಗಿದ್ದ ಆರಿಫ್ ಮುಹಮ್ಮದ್ ಖಾನ್ ಅವರು ಇದೀಗ ಬಿಹಾರದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.* ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದ್ದು, ಬಿಹಾರದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. * 2019ರಲ್ಲಿ ಅಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕೇರಳ ರಾಜ್ಯಪಾಲರಾಗಿ ಖಾನ್ ಅವರನ್ನು ನೇಮಿಸಿದರು. ಅವರು ತ್ವರಿತ ತ್ರಿವಳಿ ತಲಾಖ್ ಅನ್ನು ನಿಷೇಧಿಸುವ ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ಬೆಂಬಲಿಸಿದ್ದರು. ಆರಿಫ್ ಮೊಹಮ್ಮದ್ ಖಾನ್ ಅವರು ಶಾ ಬಾನೋ ಪ್ರಕರಣದಲ್ಲಿ 1986ರಲ್ಲಿ ರಾಜೀವ್ ಗಾಂಧಿ ನೇತೃತ್ವದ ಸಂಪುಟದಿಂದ ಹೊರನಡೆದಿದ್ದರು.