Job Description: * ಬ್ಯಾಟರ್ ನಿತೀಶ್ ರಾಣಾ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. “ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ತಂಡದ ನಾಯಕತ್ವ ವಹಿಸಲಿದ್ದಾರೆ.* ಈ ಹಿಂದೆ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 12 ಟಿ20 ಪಂದ್ಯಗಳಲ್ಲಿ ದೆಹಲಿ ತಂಡವನ್ನು ರಾಣಾ ಮುನ್ನಡೆಸಿದ್ದರು. ಅಲ್ಲದೆ ಅದರಲ್ಲಿ ಎಂಟು ಪಂದ್ಯಗಳಲ್ಲಿ ತಮ್ಮ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೆಕೆಆರ್‌ ಪರ 135.61 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್‌ ಬೀಸಿರುವ ರಾಣಾ, 74 ಪಂದ್ಯಗಳಿಂದ 1744 ರನ್ ಗಳಿಸಿದ್ದಾರೆ.