* ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್-ಯೋಲ್ (Yoon Suk Yeol) ಅವರು ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಣೆ ಮಾಡಿದ್ದರು. ಆದರೆ ಜಾರಿಗೊಳಿಸಿದ್ದ ಸೇನಾಡಳಿತವನ್ನು ಮತ್ತೆ ವಾಪಸ್ ತೆಗೆದುಕೊಂಡಿದೆ.* ದಕ್ಷಿಣ ಕೊರಿಯಾದ ಅಧ್ಯಕ್ಷ ಸುಕ್-ಯೋಲ್ ಮಂಗಳವಾರ(ಡಿಸೆಂಬರ್ 03) ರಾತ್ರಿ ಆಘಾತಕಾರಿ ಘೋಷಣೆ ಮಾಡಿದ್ದರು. ದೇಶದಲ್ಲಿ ರಾಷ್ಟ್ರೀಯ ತುರ್ತುಸ್ಥಿತಿ ಮತ್ತು ಮಿಲಿಟರಿ ಆಡಳಿತವನ್ನು ಘೋಷಿಸಲಾಗಿತ್ತು.* ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ಬುಧವಾರ(ಡಿಸೆಂಬರ್ 4) ಮಾರ್ಷಲ್ ಕಾನೂನನ್ನು ಹೇರುವ ಅಲ್ಪಾವಧಿಯ ಕ್ರಮವನ್ನು ಕೈಬಿಟ್ಟಿದ್ದಾರೆ.* ಶಾಸಕರು ಭದ್ರತಾ ಪಡೆಗಳನ್ನು ಧಿಕ್ಕರಿಸಿ ಅವರ ಘೋಷಣೆಗೆ ವಿರುದ್ಧವಾಗಿ ಮತ ಚಲಾಯಿಸಿದರು. ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು ಹೋರಾಟ ನಡೆಸಿದರು. ಇದರ ಬೆನ್ನಲ್ಲೇ ಸೇನಾಡಳಿತ ವಾಪಸ್ ತೆಗೆದುಕೊಳ್ಳಲಾಗಿದೆ.* ಅಧ್ಯಕ್ಷ ಯುನ್ ಸುಕ್-ಯೋಲ್ ಅವರ ಘೋಷಣೆಯ ನಂತರ, ದಕ್ಷಿಣ ಕೊರಿಯಾದ ಶಾಸಕರು ಸಮರ ಕಾನೂನನ್ನು ಬಲವಾಗಿ ವಿರೋಧಿಸಿದರು. ಸೇನಾಡಳಿತ ಜಾರಿ ಆದೇಶದಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಎದುರಾಗಲಿದೆ.ತಕ್ಷಣ ಈ ಆದೇಶವನ್ನು ಹಿಂಪಡೆಯುವಂತೆ ಸಂಪುಟ ಸಚಿವರು ಯೂನ್ ಸುಕ್ ಯೋಲ್ ಮೇಲೆ ಒತ್ತಡ ಹೇರಿದ್ದರು. ಇದೀಗ ಸುಕ್ ಯೋಲ್ ಅವರು ಸಚಿವರ ಒತ್ತಡಕ್ಕೆ ಮಣಿದಿದ್ದಾರೆ.* ದೇಶದ ವಿರೋಧ ಪಕ್ಷಗಳು ಸಂಸತ್ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿ. ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್ ಯೋಲ್ ಆರೋಪಿಸಿದ್ದರು.* ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ದೇಶವನ್ನು ಉದ್ದೇಶಿಸಿ ದೂರದರ್ಶನದ ಮೂಲಕ ಅವರು ತಿಳಿಸಿದ್ದರು. * 1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಸೇನಾಡಳಿತ ಜಾರಿ’ ಆದೇಶ ಹೊರಡಿಸಿದ್ದರು.* ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೆಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.