* ಕಳೆದ ಆರು ವರ್ಷಗಳಿಂದ ನಿರಂತರವಾಗಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಈ ಸಾಲಿನ ಸಭೆಗೆ ಹಾಜರಾಗುವುದಿಲ್ಲ ಎಂಬ ವರದಿ ಪ್ರಕಟವಾಗಿದೆ.* ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲಿರುವ ಜಿ-7 ಶೃಂಗಸಭೆಗೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿಲ್ಲ ಎಂದು 'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ.* ಕೆನಡಾ ಸರಕಾರ ಈವರೆಗೆ ಶೃಂಗಸಭೆಯ ಅತಿಥಿ ನಾಯಕರ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೂ, ಸ್ಥಳೀಯ ಮಾಧ್ಯಮಗಳ ಪ್ರಕಾರ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಉಕ್ರೇನ್ ಹಾಗೂ ಬ್ರೆಜಿಲ್ ನಾಯಕರಿಗೆ ಆಹ್ವಾನ ನೀಡಲಾಗಿದೆ.* ಪ್ರಧಾನಿಗೆ ಆಹ್ವಾನ ನೀಡದಿರುವ ಕುರಿತು, ಸಿಖ್ ಸಂಘಟನೆಗಳ ಒತ್ತಡವೇ ಕಾರಣ ಎನ್ನಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.* ಇದಕ್ಕೆ ಪೂರಕವಾಗಿ, ಭಾರತ-ಕೆನಡಾ ನಡುವೆ ಕಳೆದ ವರ್ಷದಿಂದ ಉದ್ವಿಗ್ನತೆ ಇರುತ್ತಿದೆ. 2023ರ ಸೆಪ್ಟೆಂಬರ್ನಲ್ಲಿ ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ, ಭಾರತ ಸರ್ಕಾರದ ಕೈವಾಡವಿದೆ ಎಂದು ಕೆನಡಾ ಆರೋಪಿಸಿತ್ತು. ಭಾರತ ಈ ಆರೋಪಗಳನ್ನು ತಿರಸ್ಕರಿಸಿದರೂ, ಅದರಿಂದ ಬಳಿಕ ಉಭಯ ದೇಶಗಳ ಸಂಬಂಧ ಹದಗೆಟ್ಟಿದೆ.