* ಐಶ್ವರ್ಯಾ ಮಹಾದೇವ್ ಅವರನ್ನು ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ. ಈ ಕುರಿತು ಎಐಸಿಸಿಯಿಂದ ಭಾನುವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.* ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಈ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಐಶ್ವರ್ಯಾ ಕಾಂಗ್ರೆಸ್ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆಯೂ ಆಗಿದ್ದಾರೆ.* ಮೂಲತಃ ಮೈಸೂರು ಜಿಲ್ಲೆ ಕೆಆರ್ ನಗರ ಮೂಲದ ಐಶ್ವರ್ಯಾ, ಮಾಜಿ ಶಾಸಕ ದಿವಂಗತ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿ. ಮಂಚನಹಳ್ಳಿ ಮಹಾದೇವ್, ಹಿಂದೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಆಪ್ತರಾಗಿದ್ದರು.* ಅತ್ಯಲ್ಪ ವಯಸ್ಸಿನಲ್ಲೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾಗಿದ್ದ ಐಶ್ವರ್ಯಾ, ನಂತರ ರಾಷ್ಟ್ರೀಯ ವಕ್ತಾರೆಯಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.