* ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಪದಕ ವಿಜೇತರಾದವರು ಪರಿಷ್ಕೃತ ಮಾನದಂಡಗಳ ಪ್ರಕಾರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಅವರು ತಿಳಿಸಿದ್ದಾರೆ.* ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ "ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ" ಎಂದು ಅನುರಾಗ್ ಠಾಕೂರ್ ಅವರು ಹೇಳಿದ್ದಾರೆ.* ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ "ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವವರಿಗೆ ಈ ಪರಿಷ್ಕೃತ ಆದೇಶ ಸಹಾಯಕವಾಗಲಿದೆ" ಎಂದು ತಿಳಿಸಿದ್ದಾರೆ.* "ಈ ಬೇರುಮಟ್ಟದ ನಿರ್ಧಾರದಿಂದ ಖೇಲೋ ಇಂಡಿಯಾ ಗೇಮ್ಸ್, ಯೂಥ್‌, ಯೂನಿವರ್ಸಿಟಿ, ಪ್ಯಾರಾ ಹಾಗೂ ವಿಂಟರ್ ಗೇಮ್ಸ್‌ ಪದಕ ವಿಜೇತರು ಸರ್ಕಾರಿ ಉದ್ಯೋಗ ಪಡೆಯಲು ಅರ್ಹತೆಗಿಟ್ಟಿಸಿಕೊಳ್ಳಲಿದ್ದಾರೆ.* ಬೇರುಮಟ್ಟದಲ್ಲಿನ ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಗೇಮ್ಸ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 2018ರಲ್ಲಿ ಆರಂಭಿಸಲಾಗಿದೆ.