* ಖ್ಯಾತ ಭೌತಶಾಸ್ತ್ರಜ್ಞ ಮತ್ತು ಬರಹಗಾರ ಡಾ. ಜಯಂತ್ ನಾರ್ಲಿಕರ್ ಇಂದು ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.* ನಾರ್ಲಿಕರ್ ‘ಬಿಗ್ ಬ್ಯಾಂಗ್’ ಸಿದ್ಧಾಂತಕ್ಕೆ ಪರ್ಯಾಯವಾದ ಮಾದರಿಗಳನ್ನು ಪ್ರತಿಪಾದಿಸಿದ್ದಕ್ಕಾಗಿ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯಾಗಿದ್ದರು.* ಅವರು 1994ರಿಂದ 1997ರವರೆಗೆ ಅಂತರರಾಷ್ಟ್ರೀಯ ಖಗೋಳ ಒಕ್ಕೂಟದ ವಿಶ್ವವಿಜ್ಞಾನ ಆಯೋಗದ ಅಧ್ಯಕ್ಷರಾಗಿದ್ದರು. ಇತ್ತೀಚೆಗೆ ಅವರು IUCAAನಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದರು.* ಬಿಎಚ್ಯು ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.* ಅವರಿಗೆ 1962ರಲ್ಲಿ ಸ್ಮಿತ್ ಪ್ರಶಸ್ತಿ ಮತ್ತು 1967ರಲ್ಲಿ ಆಡಮ್ಸ್ ಪ್ರಶಸ್ತಿ ಲಭಿಸಿತ್ತು. ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ಗೆ ಸೇರಲು ಅವರು 1972ರಲ್ಲಿ ಭಾರತಕ್ಕೆ ಮರಳಿದ್ದರು.* 1988ರಿಂದ 2003ರವರೆಗೆ IUCAA ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾರ್ಲಿಕರ್, ಭಾರತೀಯ ಖಗೋಳ ವಿಜ್ಞಾನ ಕ್ಷೇತ್ರದ ಬೆಳವಣಿಗೆಗೆ ಮಹತ್ವಪೂರ್ಣ ಕೊಡುಗೆ ನೀಡಿದವರು.* ಅವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪತ್ನಿ ಮಂಗಳಾ 2023ರ ಜುಲೈನಲ್ಲಿ ನಿಧನರಾಗಿದ್ದರು.