Job Description: * ದಕ್ಷಿಣ ಭಾರತದ ಖ್ಯಾತ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ 78 ವರ್ಷದ ವಾಣಿ ಜಯರಾಂ ರವರು ಫೆ.04 ರಂದು ನಿಧನರಾಗಿದ್ದಾರೆ. 10 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಿನ್ನೆಲೆ ಗಾಯಕಿಯಾಗಿದ್ದರು. * ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದರು. ವಾಣಿ ಜಯರಾಂ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. * ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.