* ಖ್ಯಾತ ಹಿಂದೂಸ್ತಾನಿ ಗಾಯಕಿ 92 ವರ್ಷ ವಯಸ್ಸಿನ ಡಾ. ಪ್ರಭಾ ಅತ್ರೆ ಅವರು ಜನವರಿ 13 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ. * ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಮೂರು ಪದ್ಮ ಪ್ರಶಸ್ತಿಗಳಿಗೆ ಭಾಜನರಾದ ಖ್ಯಾತ ಗಾಯಕಿ ಪ್ರಭಾ ಅತ್ರೆ ಪದ್ಮಶ್ರೀ (1990), ಪದ್ಮಭೂಷಣ (2002) ಮತ್ತು ಪದ್ಮ ವಿಭೂಷಣ (2022) ಪಡೆದಿದ್ದರು.* ಕಾನೂನು ಪದವೀಧರರಾಗಿದ್ದ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು.