* ಖ್ಯಾತ ಕನ್ನಡ ಲೇಖಕರಾದ 89 ವರ್ಷ ವಯಸ್ಸಿನ ಕಮಲಾ ಹಂಪನ ಅವರು ಜೂನ್ 22 ರಂದು ಬೆಳಗಿನಜಾವ ರಾಜಾಜಿನಗರದ ನಗರದ ಹಂಪನಾ ಅವರ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.* ಸಾಹಿತಿ ಕಮಲಾ ಹಂಪನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. * 1959 ರಲ್ಲಿ ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿದ್ದಾರೆ. ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾನಿಲಯಗಳಲ್ಲಿಯೂ ಸೇವೆ ಸಲ್ಲಿಸಿದ್ದರು.* 2003 ರಲ್ಲಿ ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. ಡಾ.ಕಮಲಾ ಹಂಪನಾ ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. * ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಿತ್ತೂರು ಚನ್ನಮ್ಮ ಪ್ರಶಸ್ತಿ (2019), ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಹಂಪಿ 2 ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ - ಗೌರವ ಡಾಕ್ಟರೇಟ್ (2008), ರನ್ನ ಪ್ರಶಸ್ತಿ (1996), ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ (2007) ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.* ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆ ಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas ಹಾಗೂ Jainism and Other Essays ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ರಚಿಸಿದ್ದಾರೆ.* ಕಮಲ ಹಂಪನಾ ಅವರು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ, ಸಂಶೋಧನಾ ಕೃತಿಗಳಾದ ತುರಂಗ ಭಾರತ - ಒಂದು ಅಧ್ಯಯನ, ಶಾಂತಿನಾಥ, ಆದರ್ಶ ಜೈನ ಮಹಿಳೆಯರು, ಅನೇಕಾಂತವಾದ, ನಾಡು ನುಡಿ ನಾವು, ಜೈನ ಸಾಹಿತ್ಯ ಪರಿಸರ, ಬದ್ದವಣ, ರೋಣದ ಬಸದಿ ಸೇರಿ ಹಲವು ಕಥಾ ಕವನ ಸಂಕಲನಗಳು, ಶಿಶು ಸಾಹಿತ್ಯ, ಅನುವಾದಗಳು, ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಪ್ರಿಯರಿಗಾಗಿ ಕೊಡುಗೆ ನೀಡಿದ್ದಾರೆ.