* ಚೆನ್ನೈನ ಖ್ಯಾತ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಡಾ. ಎಂ.ಆರ್. ಶ್ರೀನಿವಾಸನ್ ಅವರು ಮಂಗಳವಾರ (ಮೇ 20) ತಮ್ಮ 95ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.* ಡಾ. ಶ್ರೀನಿವಾಸನ್ ಅವರು ಪರಮಾಣು ಪಿತಾಮಹ ಹೋಮಿ ಭಾಭಾ ಜೊತೆ ಭಾರತದ ಮೊದಲ ಪರಮಾಣು ರಿಯಾಕ್ಟರ್ ನಿರ್ಮಾಣದಲ್ಲಿ ಭಾಗಿಯಾಗಿದ್ದರು.* 1955ರಲ್ಲಿ ಪರಮಾಣು ಇಂಧನ ಇಲಾಖೆಯಲ್ಲಿ ಸೇವೆ ಪ್ರಾರಂಭಿಸಿ, ಐದು ದಶಕಗಳ ಸೇವೆ ಸಲ್ಲಿಸಿದರು.* 1959ರಲ್ಲಿ ದೇಶದ ಮೊದಲ ಪರಮಾಣು ವಿದ್ಯುತ್ ಸ್ಥಾವರದ ಪ್ರಧಾನ ಯೋಜನಾ ಎಂಜಿನಿಯರ್ ಆಗಿ ನೇಮಕವಾಗಿದ್ದು, 1967ರಲ್ಲಿ ಮದ್ರಾಸ್ ಪರಮಾಣು ವಿದ್ಯುತ್ ಸ್ಥಾವರದ ಮುಖ್ಯ ಯೋಜನಾ ಎಂಜಿನಿಯರ್ ಆಗಿ ಕೆಲಸ ಮಾಡಿದರು.* 1974ರಲ್ಲಿ ಡಿಎಇಯ ಎಂಜಿನಿಯರಿಂಗ್ ವಿಭಾಗದ ನಿರ್ದೇಶಕರಾಗಿ, 1984ರಲ್ಲಿ ಪರಮಾಣು ವಿದ್ಯುತ್ ಮಂಡಳಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ದೇಶದಾದ್ಯಂತ ಪರಮಾಣು ಯೋಜನೆಗಳ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು.* 1987ರಲ್ಲಿ ಪರಮಾಣು ಶಕ್ತಿ ಆಯೋಗದ ಅಧ್ಯಕ್ಷ ಮತ್ತು ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡರು. ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಅವರ ನೇತೃತ್ವದಲ್ಲಿ 18 ಪರಮಾಣು ವಿದ್ಯುತ್ ಘಟಕಗಳನ್ನು ಅಭಿವೃದ್ಧಿಪಡಿಸಲಾಯಿತು.* ಪರಮಾಣು ಕ್ಷೇತ್ರದಲ್ಲಿ ನೀಡಿದ ಅಪೂರ್ವ ಕೊಡುಗೆಗಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.