* ಬುಡಕಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು 2024 ಏಪ್ರಿಲ್ 24 ರಂದು ಬೆಳಗಿನ ಜಾವ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ.* ಧಾರೇಶ್ವರ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಕುಂದಾಪುರ ತಾಲ್ಲೂಕಿನ ನಾಗೂರಿನ ಸ್ವಗೃಹದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು, ಬಳಿಕ ಅಂತ್ಯಸಂಸ್ಕಾರ ನೆರವೇರಿತು.* ಉತ್ತರ ಕನ್ನಡ ಜಿಲ್ಲೆ ಗೋಕರ್ಣದಲ್ಲಿ ಧಾರೇಶ್ವರರು ಜನಿಸಿದ್ದಾರೆ. ನಾರ್ಣಪ್ಪ ಉಪ್ಪರರ ಶಿಷ್ಯರಾಗಿ, ಕಾಳಿಂಗ ನಾವುಡರ ಸಹವರ್ತಿಯಾಗಿ ಯಕ್ಷಗಾನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.* ಯಕ್ಷಗಾನದಲ್ಲಿ ಕ್ಯಾಸೆಟ್‌ಗಳನ್ನು ಆರಂಭಿಸಿ 400ಕ್ಕೂ ಹೆಚ್ಚು ಕ್ಯಾಸೆಟ್‌ಗಳನ್ನು ಬಿಡುಗಡೆ ಮಾಡಿದ್ದಾರೆ. 300 ರೂ ಅಧಿಕ ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಪ್ರಸಂಗಗಳನ್ನು ನಿರ್ದೇಶಿಸಿದ್ದಾರೆ.* ಧಾರೇಶ್ವರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿವೆ.