Job Description: * ಕಲಬುರಗಿ ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಬರುವ ವಿಮಾನ ನಿಲ್ದಾಣದಲ್ಲಿ ರಾತ್ರಿ ಸಮಯ ವಿಮಾನಗಳ ಲ್ಯಾಂಡಿಂಗ್‌ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಅನುಮತಿ ನೀಡಲಾಗಿದ್ದು, 'ಉಡಾನ್' ಯೋಜನೆಯಡಿ 2019 ರ ನವೆಂಬರ್ 22 ರಂದು ಕಲಬುರಗಿ ವಿಮಾನ ಕಾರ್ಯಾಚರಣೆ ಆರಂಭವಾಯಿತು.* ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್'ನಿಂದ ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ಸಿಗಲಿದ್ದು, ಉದ್ಯಮಿಗಳು, ಅಧಿಕಾರಿಗಳಿಗೆ ಬೆಂಗಳೂರ, ಮುಂಬೈ, ಚನೈ, ಗೋವಾ, ದೆಹಲಿಗೆ ಪ್ರಯಾಣ ಬೆಳೆಸಿ ಅದೇ ದಿನ ರಾತ್ರಿ ಮರಳಬಹುದು ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಯಾದ ಮಂಜುನಾಥ ಜೇವರ್ಗಿ ರವರು ತಿಳಿಸಿದ್ದಾರೆ.