* ಮೇ 15ರಂದು ನಡೆದ ಜಂಟಿ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಲೋಗೋ ಇರುವ ಟಿ20 ತಂಡದ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ. ಸ್ಕಾಟ್ಲೆಂಡ್ ಪುರುಷರ ಟಿ20 ಕ್ರಿಕೆಟ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ಜೆರ್ಸಿಯನ್ನು ಅನಾವರಣಗೊಳಿಸಿದರು. * 2024 ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವ ವಹಿಸುವುದಾಗಿ ಏಪ್ರಿಲ್ 21 ರಂದು ಕೆಎಂಎಫ್ ಘೋಷಿಸಿತ್ತು. ನಂದಿನಿಯ ಲೋಗೋವನ್ನು ಸ್ಕಾಟ್ಲೆಂಡ್ ತಂಡದ ಜೆರ್ಸಿಯ ತೋಳಿನ ಭಾಗದಲ್ಲಿ ಮುದ್ರಿಸಲಾಗಿದೆ.* ಟಿ20 ವಿಶ್ವಕಪ್ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವ ವಹಿಸುವುದು ಜಾಗತಿಕ ಮಾರುಕಟ್ಟೆಯಲ್ಲಿ ಉತ್ಪನ್ನಗಳ ಮಾರಾಟ ಹೆಚ್ಚಿಸುವ ದೃಷ್ಟಿಯಿಂದ ಪ್ರಮುಖ ನಿರ್ಧಾರವಾಗಿದೆ.* ಪಂದ್ಯಾವಳಿಯ ಮೊದಲು ಮತ್ತು ಪಂದ್ಯ ನಡೆಯುತ್ತಿರುವ ಸಮಯದಲ್ಲಿ ಹಲವಾರು ಮಾಧ್ಯಮ ಚಟುವಟಿಕೆಗಳನ್ನು ಯೋಜಿಸಲಾಗಿದೆ. ಡೈರಿ ಉತ್ಪನ್ನಗಳಾದ ತುಪ್ಪ ಮತ್ತು ಸಿಹಿತಿಂಡಿಗಳನ್ನು ಅಮೆರಿಕಕ್ಕೆ ರವಾನಿಸಲಾಗುತ್ತದೆ ಎಂದು ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ತಿಳಿಸಿದ್ದಾರೆ.* 2024ರ ವಿಶ್ವಕಪ್ ಟೂರ್ನಿಯನ್ನು ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಜಂಟಿಯಾಗಿ ಆಯೋಜಿಸಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ.