* ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 'ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ'ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.* ಈ ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡುವುದು ಈ ದತ್ತಿ ಪ್ರಶಸ್ತಿಯ ಆಶಯವಾಗಿದೆ.* ಯಡಿಯೂರಪ್ಪ ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ನ ಅಧ್ಯಕ್ಷರಾದ ಮಹೇಶ ಜೋಶಿ ಅವರು ತಿಳಿಸಿದ್ದಾರೆ.