* ‘ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್.ಎಂ.ಕೃಷ್ಣ ಅವರ ಉಪಸ್ಥಿತಿ ಸಮ್ಮೇಳನದ ಮೆರಗು ಹೆಚ್ಚಿಸುತ್ತಿತ್ತು. ಈಗ ಅವರ ಹೆಸರನ್ನು ವೇದಿಕೆಗೆ ಇಡುವಂತಹ ಸಂದರ್ಭ ಬಂದಿರುವುದು ನಿಜಕ್ಕೂ ವಿಷಾದಕರ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಹೇಳಿದರು.* ಕಸಾಪ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಮಹೇಶ್ ಜೋಶಿ ಅವರು, '87ನೇ ಸಾಹಿತ್ಯ ಸಮ್ಮೇಳನ ನಡೆಯಲಿರುವ ನೆಲದಿಂದ ಬಂದಿದ್ದ ಎಸ್.ಎಂ. ಕೃಷ್ಣ ಅವರನ್ನು ಸಮ್ಮೇಳನಕ್ಕೆ ಕರೆತರಬೇಕೆಂದು ಸಾಕಷ್ಟು ಪ್ರಯತ್ನಿಸಿದ್ದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆಯೂ ದೊರಕಿತ್ತು. ಈಗ ಅವರ ನಿಧನ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ' ಎಂದು ವಿಷಾದ ವ್ಯಕ್ತಪಡಿಸಿದರು.* ಕಸಾಪ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಪದ್ಮನಿ ನಾಗರಾಜು, ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಉಪಸ್ಥಿತರಿದ್ದರು.