* ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಜನವರಿ 19 ರಂದು ಶಿಫಾರಸ್ಸು ಮಾಡಿದೆ.* ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು 2015ರಿಂದ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು ಫೆಬ್ರುವರಿ 24ರಂದು ನಿವೃತ್ತರಾಗಲಿದ್ದಾರೆ.* ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಕೊಲಿಜಿಯಂ, 'ನ್ಯಾಯಮೂರ್ತಿ ವರಾಳೆ ಅವರು ಪರಿಶಿಷ್ಟ ಜಾತಿಗೆ ಸೇರಿದ ಅತ್ಯಂತ ಹಿರಿಯ ನ್ಯಾಯಮೂರ್ತಿ, ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಪೈಕಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ನ್ಯಾಯಮೂರ್ತಿಯಾಗಿದ್ದಾರೆ.* ಬೆಳಗಾವಿ ಜಿಲ್ಲೆಯ ನಿಪ್ಪಾಣಿಯವರಾದ ನ್ಯಾಯಮೂರ್ತಿ ವರಾಳೆ ಅವರು 1985ರ ಆಗಸ್ಟ್‌ನಲ್ಲಿ ವಕೀಲಿಕೆ ಸನ್ನದು ಪಡೆದು. ಎಸ್. ಎನ್. ಲೋಯಾ ಅವರ ಕಚೇರಿಯಲ್ಲಿ ವೃತ್ತಿ ಆರಂಭಿಸಿದ್ದರು. 1992ರವರೆಗೆ ಔರಂಗಾಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು.* ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ 2008ರ ಜುಲೈ 18ರಂದು ನೇಮಕಗೊಂಡಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ 2022ರ ಅಕ್ಟೋಬರ್ 12ರಂದು ನೇಮಿಸಲಾಗಿತ್ತು.