* ಹೈನುಗಾರಿಕೆ, ರೇಷ್ಮೆ ಹಾಗೂ ತರಕಾರಿ ಬೆಳೆಯುವ ಅಗ್ರ ಜಿಲ್ಲೆಗಳ ಸಾಲಿನಲ್ಲಿ ಚಿನ್ನದ ನಾಡು ಕೋಲಾರ ಮತ್ತೊಮ್ಮೆ ಗಮನ ಸೆಳೆದಿದ್ದು, ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಬಳಿಯ ಲಕ್ಷ್ಮೀಪುರ ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ ಆನೆಗಳ ಆರೈಕೆ ಕೇಂದ್ರವನ್ನು ಆರಂಭಿಸಲಾಗಿದೆ.* ಆನೆಗಳ ಆರೋಗ್ಯ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಲಿದ್ದು, ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ತಂದು ಆರೈಕೆ ಮಾಡಲಾಗುತ್ತಿದೆ.