* ಭಾರತದ ಪ್ರಮುಖ ಸ್ಪಿನ್ನರ್ಗಳಲ್ಲಿ ಒಬ್ಬರಾದ ರವಿಚಂದ್ರನ್ ಅಶ್ವಿನ್ ಅವರು ಡಿಸೆಂಬರ್ 18, 2024 ರಂದು ಬ್ರಿಸ್ಬೇನ್ನಲ್ಲಿ ಮೂರನೇ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ನ ಕೊನೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.* ಈ ಮೂಲಕ 14 ವರ್ಷಗಳ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.* ರವಿಚಂದ್ರನ್ ಅಶ್ವಿನ್ 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ.*ಈ ಮೂಲಕ 132 ಟೆಸ್ಟ್ಗಳಲ್ಲಿ 619 ವಿಕೆಟ್ಗಳನ್ನು ಪಡೆದಿರುವ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಅನಿಲ್ ಕುಂಬ್ಳೆ ಬಳಿಕ ಭಾರತದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಾಗಿ ವೃತ್ತಿ ಬದುಕನ್ನು ಅಶ್ವಿನ್ ಕೊನೆಗೊಳಿಸಿದರು.* ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇನ್ನು 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ.* ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ಮೂರು ಸೀಸನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಪ್ರಾಬಲ್ಯ ಸಾಧಿಸಿದ ಅಶ್ವಿನ್, 100 WTC ವಿಕೆಟ್ಗಳನ್ನು ದಾಖಲಿಸಿದ ಮೊದಲ ಬೌಲರ್ ಆಗಿದ್ದಾರೆ.* ಅಶ್ವಿನ್ 63 ಇನ್ನಿಂಗ್ಸ್ಗಳಲ್ಲಿ ಒಂದು ಅರ್ಧಶತಕ, 65 ರನ್ಗಳೊಂದಿಗೆ 16.44 ರ ಸರಾಸರಿಯಲ್ಲಿ 707 ರನ್ ಗಳಿಸಿದರು. ಅವರು ಭಾರತದ ಪರ ODIಗಳಲ್ಲಿ 13 ನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.