* ಕರ್ನಾಟಕ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ನೇಮಕಗೊಂಡಿದ್ದಾರೆ.* ಶ್ರೀಕೃಷ್ಣನ್ ಅವರು ಬ್ಯಾಂಕಿಂಗ್ ವಿವಿಧ ಕ್ಷೇತ್ರದಲ್ಲಿ ಹಾಗೂ ತಂತ್ರಜ್ಞಾನ ಪಾವತಿ ಕ್ಷೇತ್ರದಲ್ಲಿ 40 ವರ್ಷಗಳ ಅನುಭವವನ್ನು ಹೊಂದಿದ್ದಾರೆ.    * ಕರ್ಣಾಟಕ ಬ್ಯಾಂಕ್ ಶ್ರೀಕೃಷ್ಣನ್ ಹರಿಹರ ಶರ್ಮ ಅವರನ್ನು ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅಧಿಕಾರಾವಧಿಗೆ ನೇಮಕ ಮಾಡಿದೆ.