* ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 'ಕರ್ನಾಟಕ ಪ್ಲಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸುಗ್ರೀವಾಜ್ಞೆ -2025'ಗೆ ಅಂಕಿತ ಹಾಕಿದ್ದಾರೆ.* ಈ ಸುಗ್ರೀವಾಜ್ಞೆಯ ಮೂಲಕ ಇ-ಕಾಮರ್ಸ್ ಹಾಗೂ ಫುಡ್ ಡೆಲಿವರಿ ಕಂಪನಿಗಳ ಗಿಗ್ ಕಾರ್ಮಿಕರಿಗೆ ಅಪಘಾತ ಪರಿಹಾರ, ಮರಣ ಭತ್ಯೆ, ಹೆರಿಗೆ ಭತ್ಯೆ, ಮಕ್ಕಳ ವಿದ್ಯಾಭ್ಯಾಸ ಧನಸಹಾಯ, ವಸತಿ, ವೃದ್ಧಾಪ್ಯ ಪಿಂಚಣಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಹಂತ ಹಂತವಾಗಿ ನೀಡಲಾಗುತ್ತದೆ.* ಈ ಯೋಜನೆಗಾಗಿ ‘ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ’ ಸ್ಥಾಪನೆಗೊಳ್ಳಲಿದ್ದು, ಅಗ್ರಿಗೇಟರ್ ಸಂಸ್ಥೆಗಳಿಂದ ಶೇ.1 ರಿಂದ 5ರಷ್ಟು ವಹಿವಾಟು ಹಣವನ್ನು ಮಂಡಳಿಗೆ ಸಂಗ್ರಹಿಸಿ, ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲಾಗುತ್ತದೆ.* ಈ ಮಂಡಳಿಗೆ ಕಾರ್ಮಿಕ ಸಚಿವರು ಅಧ್ಯಕ್ಷರಾಗಿದ್ದು, ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಗಿಗ್ ಕಾರ್ಮಿಕರ ನಾಲ್ವರು ಪ್ರತಿನಿಧಿಗಳು ಸದಸ್ಯರಾಗಿ ಕೆಲಸ ಮಾಡುತ್ತಾರೆ.ಯೋಜನೆಯ ವಿಶೇಷತೆಗಳು:- ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ.- ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳುವುದು. (ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ)- ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ.- ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ.ನೋಂದಣಿಗೆ ಅರ್ಹ ಕಾರ್ಮಿಕರು:-* ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ಕಾರ್ಟ್, ಬಿಗ್ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು.ದೊರಕುವ ಸೌಲಭ್ಯಗಳು:-- ಅಪಘಾದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ.4.00 ಲಕ್ಷಗಳು.- ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ- ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)