* ಕರ್ಣಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ವಿಭು ಬಖ್ರು ಅವರು ಜುಲೈ 19, ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.* ದಿಲ್ಲಿ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಯಾಗಿದ್ದ ಬಖ್ರು ಅವರನ್ನು, ಸಜೆ ಆಗಿದ್ದ ನ್ಯಾ. ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್ಗೆ ಬಡ್ತಿ ನೀಡಿದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಕಾನೂನು ಮತ್ತು ನ್ಯಾಯ ಇಲಾಖೆಗೆ ಅವರ ನೇಮಕಕ್ಕೆ ಶಿಫಾರಸು ಮಾಡಿತ್ತು. ಸರ್ಕಾರ ಜುಲೈ 14ರಂದು ನೇಮಕಾತಿ ಆದೇಶ ಹೊರಡಿಸಿತು.* ವಿಭು ಬಖ್ರು 1966ರಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದರು. ಅವರು ದಿಲ್ಲಿಯಲ್ಲಿ ಶಿಕ್ಷಣ ಪಡೆದು, 1989ರಲ್ಲಿ ಲೆಕ್ಕ ಪರಿಶೋಧಕ (CA) ಮತ್ತು 190ರಲ್ಲಿ ಕಾನೂನು ಪದವಿ ಪಡೆದರು.* 2011ರಲ್ಲಿ ಹಿರಿಯ ವಕೀಲರಾಗಿ ಮತ್ತು 2013ರಲ್ಲಿ ದಿಲ್ಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2015ರಲ್ಲಿ ಅವರು ಕಾಯಂ ನ್ಯಾಯಮೂರ್ತಿಯಾದರು.* 2024ರ ಡಿಸೆಂಬರ್ 5ರಿಂದ 2025ರ ಜನವರಿ 21ರವರೆಗೆ ಅವರು ದಿಲ್ಲಿ ಹೈಕೋರ್ಟ್ನಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. ಬಳಿಕ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾಯಿಸಲಾಯಿತು.* ಪ್ರಮಾಣವಚನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು ಮತ್ತು ನ್ಯಾಯಾಂಗದ ಪ್ರಮುಖರು ಉಪಸ್ಥಿತರಿದ್ದರು.