* ಕರ್ನಾಟಕ ಹೈಕೋರ್ಟ್ ನ ನ್ಯಾಯಾಂರ್ತಿಯಾಗಿ ನ್ಯಾ.ವಲ್ಲೂರಿ ಕಾಮೇಶ್ವರ ರಾವ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.* ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.* ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ನ್ಯಾಯಮೂತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.* ಹೊಸದಿಲ್ಲಿ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿದ್ದ ರಾವ್ ಅವರನ್ನು ಸುಪ್ರೀಂ ಕೋರ್ಟ್ ಕರ್ನಾಟಕ್ಕೆ ವರ್ಗಾವಣೆ ಮಾಡಲಾಗಿದೆ. * 2010ರಲ್ಲಿ ನ್ಯಾ. ವಲ್ಲೂರಿ ಕಾಮೇಶ್ವರ ರಾವ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಿಂದ ನ್ಯಾ. ರಾವ್ ಅವರು ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು.