* ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 10 ರಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.* 1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ಗೆ ಶಕ್ತಿ ತುಂಬಿತ್ತು.* ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್ಎಂ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ಅವರು ಬೆಂಗಳೂರಿನಲ್ಲಿ ನಿಧನರಾದ್ದಾರೆ. ಎಸ್ಎಂ ಕೃಷ್ಣ ಅವರ ಜೀವನಚರಿತ್ರೆ ‘ಸ್ಮೃತಿ ವಾಹಿನಿ’ 2019ರ ಡಿಸೆಂಬರ್ನಲ್ಲಿ ಲೋಕಾರ್ಪಣೆಗೊಂಡಿತು.* ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.* ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.* ಎಸ್.ಎಂ.ಕೃಷ್ಣ ಅವರ ಬದುಕಿನ ಹಾದಿ : - 1932(ಮೇ 1) : ಜನನ - 1962 : ವಿಧಾನಸಭೆ ಸದಸ್ಯ- 1968 : ಲೋಕಸಭೆ ಸದಸ್ಯ- 1972 ವಿಧಾನ ಪರಿಷತ್ ಸದಸ್ಯ- ಕೈಗಾರಿಕಾ ಸಚಿವ- 1980: ಲೋಕಸಭೆ ಸದಸ್ಯ-ಕೇಂದ್ರ ಕೈಗಾರಿಕೆ ಮತ್ತು ಹಣಕಾಸು ಖಾತೆ ರಾಜ್ಯ ಸಚಿವ- 1989: ವಿಧಾನಸಭಾಧ್ಯಕ್ಷ- 1992-94: ಉಪಮುಖ್ಯಮಂತ್ರಿ - 1996: ರಾಜ್ಯಸಭಾ ಸದಸ್ಯ- 1999 : ಕೆಪಿಸಿಸಿ ಅಧ್ಯಕ್ಷ - 1999-2004: ಮುಖ್ಯಮಂತ್ರಿ - 2004-08 ಮಹಾರಾಷ್ಟ್ರರಾಜ್ಯಪಾಲ- 2009: ರಾಜ್ಯಸಭಾ ಸದಸ್ಯ- ವಿದೇಶಾಂಗ ಸಚಿವ- 2017: ಕಾಂಗ್ರೆಸ್ ಗೆ ರಾಜೀನಾಮೆ- ಬಿಜೆಪಿ ಸೇರ್ಪಡೆ- 2023 : ಸಕ್ರಿಯ ರಾಜಕಾರಣದಿಂದ ನಿವೃತ್ತಿ