* ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮಧುಸೂದನ್ ಆರ್. ನಾಯ್ಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಜನವರಿ 31 ರಂದು ಆದೇಶ ಹೊರಡಿಸಿದೆ. * ಉತ್ತರ ಕನ್ನಡ ಜಿಲ್ಲೆ ಕುಮಟಾದ ಮಧುಸೂದನ್ ನಾಯ್ಕ್ ಅವರು ಹಿಂದೆ ಅಡ್ವೋಕೇಟ್ ಜನರಲ್ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿಯೂ ಆಗಿಯೂ ಕಾರ್ಯನಿರ್ವಹಿಸಿದ್ದರು.* ಕೆ. ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಮುಗಿದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಇದ್ದು, ಈಗ ಆ ಹುದ್ದೆಯನ್ನು ಭರ್ತಿ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.* ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ’(ಜಾತಿಗಣತಿ) ವರದಿ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಪರ-ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿರುವುದು ಮಹತ್ವ ಪಡೆದುಕೊಂಡಿದೆ.