* ಇಡೀ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಈಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.* ಈ ಉನ್ನತ ಹುದ್ದೆಗೇರಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.* ಹಿರಿಯ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ ಉತ್ತರಾಖಂಡದವರು. 1989ರ ಬ್ಯಾಚ್ನ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಆರಂಭದಲ್ಲೇ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡರು.* ಕರ್ನಾಟಕ ಕೇಡರ್ನ ಅಧಿಕಾರಿಯಾಗಿ 35 ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ.* ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಕುರಿತು ಉನ್ನತ ಮಟ್ಟದ ಸಮಿತಿ ಸಭೆ ಸೇರಿ ತೀರ್ಮಾನಿಸಲಾಗಿತ್ತು. ಬಳಿಕ ಕೇಂದ್ರ ಸರ್ಕಾರಕ್ಕೂ ವರದಿ ಸಲ್ಲಿಸಲಾಗಿದೆ. ಆದಾದ ಬಳಿಕ ಮೀನಾಕ್ಷಿ ನೇಗಿ ಅವರನ್ನು ಕೇಂದ್ರ ಸರ್ಕಾರದ ಸೇವೆಯಿಂದ ಬಿಡುಗಡೆ ಮಾಡಲಾಗಿತ್ತು.