* ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕೇಂದ್ರ ಸರ್ಕಾರ ನೇಮಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆದೇಶದಂತೆ ಅವರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.* 1966ರಲ್ಲಿ ನಾಗಪುರದಲ್ಲಿ ಜನಿಸಿದ ಬಖ್ರು ಅವರು ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದರು. ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ಪದವಿ (1987), ಚಾರ್ಟರ್ಡ್ ಅಕೌಂಟೆಂಟ್ ಅರ್ಹತೆ (1989), ಮತ್ತು ಎಲ್ಎಲ್ಬಿ ಪದವಿ (1990) ಪಡೆದಿದ್ದಾರೆ.* ವಿಭು ಬಖ್ರು ಅವರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಮತ್ತು ಇತರೆ ನ್ಯಾಯಮಂಡಳಿಗಳಲ್ಲಿ ವಕೀಲಿಕೆ ನಡೆಸಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಪ್ರಮೋಶನ್ ಪಡೆದ ಅವರು 2013ರಲ್ಲಿ ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2015ರಲ್ಲಿ ಅವರು ಕಾಯಂಗೊಂಡ ನ್ಯಾಯಮೂರ್ತಿಯಾಗಿ ಪರಿಗಣಿಸಲ್ಪಟ್ಟರು.* ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕಾಲೇಜಿಯಂ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಅವರನ್ನು ಶಿಫಾರಸು ಮಾಡಿತ್ತು.