* ಕರ್ನಾಟಕದಲ್ಲಿ ಹಲವು ಉತ್ತೇಜನಗಳನ್ನು ನೀಡುವ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸಲಾಗಿದೆ.* ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿದ್ದಾರೆ.* ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಆಕರ್ಷಿಸುವ 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್ ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರುತುಗಳನ್ನು ಹೊಂದಿದೆ.* ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ ತಾಲೂಕುಗಳಿಗೆ ಆದ್ಯತೆ ನೀಡಲಾಗಿದೆ. ಇದು ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಿದೆ ಎಂದು ಸರಕಾರ ತಿಳಿಸಿದೆ.* ಕ್ವಿನ್ ಸಿಟಿಯನ್ನು ಅಭಿವೃದ್ಧಿಪಡಿಸಲು ಕೆಐಎಡಿಬಿ ಮೂಲಕ ಶೇ.30 ರಷ್ಟು ಜಾಗವನ್ನು ಎಂಎಸ್ಎಂಇಗಳಿಗೆ ಮೀಸಲಿಟ್ಟು, ತಂತ್ರಜ್ಞಾನ, ಕೌಶಲ್ಯ, ಕ್ಲಸ್ಟರ್ ಅಭಿವೃದ್ಧಿ ಮತ್ತು ಪ್ರೋತ್ಸಾಹ ಭತ್ಯೆಗಳಿಗೆ ಒತ್ತು ನೀಡಲಾಗುತ್ತದೆ.* ಕೆಲವು ಪ್ರದೇಶಗಳನ್ನು ವಿಶೇಷ ಹೂಡಿಕೆ ಪ್ರದೇಶಗಳಾಗಿ ಘೋಷಿಸಿ, ಉದ್ಯಮಗಳ ಆರ್ & ಡಿ ಮತ್ತು ಉತ್ಪಾದನೆಯನ್ನು ಒಂದೇ ಕಡೆ ಉತ್ತೇಜಿಸಲಾಗುವುದು. ಹೂಡಿಕೆದಾರರು ಕೇವೆಕ್ಸ್ ಸಬ್ಸಿಡಿ ಅಥವಾ ಉತ್ಪಾದನೆ ಆಧರಿತ ಪ್ರೋತ್ಸಾಹ ಭತ್ಯೆಯ ಆಯ್ಕೆ ಪಡೆಯುವ ಅವಕಾಶವನ್ನು ಹೊಸ ನೀತಿ ನೀಡುತ್ತದೆ.* ಬೃಹತ್ ಯೋಜನೆಗಳಿಗೆ ಸಿಗುವ ಸೌಲಭ್ಯ- ಪಿಎಲ್ಐ ಅಥವಾ ವಿಎಫ್ ಎನ ಶೇ.10ರಿಂದ 25ರಷ್ಟು ಬಂಡವಾಳ ವೆಚ್ಚ ಸಬ್ಸಿಡಿ- ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ ಹಿಂದುಳಿದ ಮತ್ತು ಅತೀ ಹಿಂದುಳಿದ- ತಾಲೂಕುಗಳಲ್ಲಿನ ಹೂಡಿಕೆಗೆ ಕ್ರಮವಾಗಿ ಶೇ. 3 ಮತ್ತು- ಶೇ. 5ರಷ್ಟು ಹೆಚ್ಚುವರಿ ಸಬ್ಸಿಡಿ- ಖಾಸಗಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೆ ಪ್ರೋತ್ಸಾಹ ಭತ್ಯೆ ಮತ್ತು- ಉದ್ಯೋಗ ಸೃಷ್ಟಿ ಮತ್ತು ಮಹಿಳಾ ಉದ್ಯೋಗಿಗಳ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಸಬ್ಸಿಡಿ- ಆರ್ಡಿ ಜತೆಗೆ ಉತ್ಪಾದನಾ ಘಟಕ ಸ್ಥಾಪನೆಗೆ ಉತ್ತೇಜನ- ಮುದ್ರಾಂಕ ಮತ್ತು ನೋಂದಣಿ ಶುಲ್ಕದಿಂದ ವಿನಾಯಿತಿ- ಭೂ ಪರಿವರ್ತನೆ ಶುಲ್ಕ ವಾಪಸ್* ಹೊಸ ನೀತಿ• ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇ. 10ರಿಂದ 30ರಷ್ಟು ಕ್ಯಾಪಿಟಲ್ ಸಬ್ಸಿಡಿ• ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿನಾಯಿತಿ• ಭೂ ಪರಿವರ್ತನೆ ಶುಲ್ಕ ವಾಪಸ್• ಎಂಎಸ್ಎಂಇಗಳಿಗೆ ವಿದ್ಯುತ್ ಬಿಲ್ ಮೇಲಿನ ತೆರಿಗೆಯಿಂದ ವಿನಾಯಿತಿ• ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ವಿದ್ಯುತ್ ಸಬ್ಸಿಡಿ• ಮಳೆ ನೀರು ಸಂಸ್ಕರಣೆ ಮತ್ತು ತ್ಯಾಜ್ಯ ನೀರು ಮರುಪೂರಣಕ್ಕೆ ಪ್ರೋತ್ಸಾಹ ಭತ್ಯೆ• ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಭತ್ಯೆ