* ಮಾಜಿ ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ಡಿ.ಆರ್. ವಿಜಯ್ ಕುಮಾರ್ ಬುಧವಾರ(ಜುಲೈ 09) ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ನೂತನ ಗೌರವ ಕೋಶಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಸಮಾರಂಭವು ಕಸಾಪದ ಕೇಂದ್ರ ಕಚೇರಿಯಲ್ಲಿ ನಡೆಯಿತು.* ವಿಜಯ್ ಕುಮಾರ್ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ 38 ವರ್ಷಗಳ ಕಾಲ ಹಣಕಾಸು ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿಭಾಯಿಸಿ ಅಪಾರ ಅನುಭವ ಹೊಂದಿದ್ದಾರೆ.* ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ನಿಷ್ಠೆಯುಳ್ಳ ವಿಜಯ್ ಕುಮಾರ್ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.* ಕಸಾಪ ನಿಬಂಧನೆ 9(3) ಅಡಿಯಲ್ಲಿ ಮಾನ್ಯ ಅಧ್ಯಕ್ಷರು ಹೊಂದಿರುವ ಅಧಿಕಾರದಡಿ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಂದ ವಿಜಯ್ ಕುಮಾರ್ ಅವರನ್ನು ಗೌರವ ಕೋಶಾಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಯಿತು.