* ಕರ್ನಾಟಕದಲ್ಲಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರುಡು ಅಧಿಸೂಚನೆಯನ್ನು ತಿರಸ್ಕರಿಸಲು ಸರ್ಕಾರ ನಿರ್ಧರಿಸಿದೆ.   * ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು (Kasturi Rangan Report) ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.*  ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರವು 2024ರ ಜುಲೈ 31ರಂದು ಆರನೇ ಕರುಡು ಅಧಿಸೂಚನೆಯನ್ನು ಹೊರಡಿಸಿತ್ತು. 60 ದಿನಗಳಲ್ಲಿಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸವಂತೆ ರಾಜ್ಯಗಳಿಗೆ ಸೂಚಿಸಿತ್ತು.    * ಕಸ್ತೂರಿ ರಂಗನ್‍ ಸಮಿತಿ ವರದಿ ಹೀಗಿದೆ : ಕಸ್ತೂರಿ ರಂಗನ್‍ ಸಮಿತಿಯು ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚದರ ಕಿಮಿ. ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ ಎಂದು ಗುರುತಿಸಿದೆ. ಈ ಪ್ರದೇಶಗಳಲ್ಲಿ ಗಣಿಗಾರಿಕೆ, ಜಲವಿದ್ಯುತ್, ಕ್ವಾರಿ, ಮರಳುಗಾರಿಕೆ ಪರಿಸರ ವಿರೋಧಿ ಕೈಗಾರಿಕೆ, ಪವನ ವಿದ್ಯುತ್ ಯೋಜನೆಗಳನ್ನು ಸಂಪೂರ್ಣ ನಿಷೇಧಿಸಬೇಕು. 20,000 ಚ,ಮೀ, ಬೃಹತ್ ಆದ ಯಾವುದೇ ಕಟ್ಟಡ ನಿರ್ಮಿಸುವ ಹಾಗಿಲ್ಲ. ಇಎಸ್ಎನಿಂದ 10ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದಾದರೇ ಪರಿಸರ ಇಲಾಖೆ, ಸ್ಥಳೀಯ ಗ್ರಾಮಸಭೆ ಅನುಮತಿ ಪಡೆಯಬೇಕು. ಈ ಪ್ರದೇಶದಲ್ಲಿ ಸಿಮೆಂಟು, ಕಲ್ಲು, ರಸಾಯನಿಕ ಬಳಸಲು, ಜನವಸತಿ ನಿರ್ಮಿಸಲು ಯಾವುದೇ ಅವಕಾಶವಿಲ್ಲ.