* ಲಂಡನ್‌ನ ಬಸವ ಅಂತರಾಷ್ಟ್ರೀಯ ಪ್ರತಿಷ್ಠಾನ ನೀಡುವ 'ಶ್ರೀ ಸಿದ್ದಗಂಗಾ ಸಿರಿ ಪ್ರಶಸ್ತಿ'ಗೆ ಸಾಹಿತಿ ಕುಂ.ವೀರಭದ್ರಪ್ಪ ಆಯ್ಕೆಯಾಗಿದ್ದಾರೆ. * ಇಂದು (ಡಿಸೆಂಬರ್ 16) ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.* ಪ್ರಶಸ್ತಿಯು 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದ್ದು,  ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಬಳಿಕ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತಿದೆ.* ಸಿದ್ಧಗಂಗಾ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಪ್ರತಿಭೆಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹದೇವಯ್ಯ ತಿಳಿಸಿದ್ದಾರೆ.