Job Description: * ಕವಿ ಹಾಗೂ ವಿಮರ್ಶಕರಾದ 82 ವರ್ಷದ ಕೆ.ವಿ.ತಿರುಮಲೇಶ್ ರವರು ಹೈದರಾಬಾದ್ ನಲ್ಲಿ ತಮ್ಮ ನಿವಾಸದಲ್ಲಿ ಜನವರಿ 30 ರಂದು ನಿಧನರಾಗಿದ್ದಾರೆ. * ಹೈದರಾಬಾದಿನ ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಇಂಗ್ಲೀಷ್ ಯಾಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು ನಿವೃತ್ತಿ ಹೊಂದಿದ್ದರು. ನಂತರ ಯೆಮನ್ ದೇಶದಲ್ಲಿ ಕೆಲಕಾಲ ಇಂಗ್ಲಿಷ್‌ ಅಧ್ಯಾಪನ ಮಾಡಿದ್ದರು. ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.* ಒಂಬತ್ತು ಕವನ ಸಂಕಲನ ಪ್ರಕಟಿಸಿದ್ದಾರೆ. ತಿರುಮಲೇಶ್ ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ. ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು.* ಅಕ್ಷಯ ಕಾವ್ಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಹೈದರಾಬಾದ್ ನಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ.