* ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಸೆಪ್ಟೆಂಬರ್15ರಂದು ಹಮ್ಮಿಕೊಂಡಿದ್ದ 2,500 ಕಿ.ಮೀ ಉದ್ದದ ಮಾನವ ಸರಪಳಿ ಲಂಡನ್‌ನ 'ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್'ಗೆ ಸೇರಿದೆ.* 'ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್'ನಿಂದ ನೀಡಲಾಗಿರುವ 'ಪ್ರಮಾಣಪತ್ರ'ದಲ್ಲಿ ಕರ್ನಾಟಕದ ಬೀದರ್‌ನಿಂದ ಚಾಮರಾಜನಗರದವರೆಗೆ ನಿರ್ಮಿಸಲಾಗಿದ್ದ 2,500 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ 25 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದನ್ನು 'ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್'ನ 'ಪ್ರೀಮಿಯಂ ಎಡಿಷನ್'ಗೆ ಸೇರಿಸಲಾಗಿದೆ ಎಂದು ತಿಳಿಸಲಾಗಿದೆ.* ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 'ಪ್ರಮಾಣಪತ್ರ' ಲಭಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.* ಮಾನವ ಸರಪಳಿ ಹಬ್ಬದಲ್ಲಿ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಿಕ್ಷಣ ಇಲಾಖೆ ಸಹಿತ 8 ಇಲಾಖೆಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದವು. * ಲಂಡನ್‌ನಲ್ಲಿರುವ ವಿಶ್ವ ದಾಖಲೆ ಸಂಖ್ಯೆಯ ಕರ್ನಾಟಕ ಪ್ರತಿನಿಧಿ ಶೈಲಜಾ ಅವರು ಬೆಂಗಳೂರಿನಲ್ಲಿ ನಡೆದ ಬೃಹತ್ ಹಾಗೂ ವರ್ಣರಂಜಿತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರ ಹೆಸರಿನಲ್ಲಿ ಪುರಸ್ಕಾರ ನೀಡಿ ಗೌರವಿಸಿದರು.* ರಾಜ್ಯದ 31 ಜಿಲ್ಲೆಗಳ ಪೈಕಿ ಗದಗ ಜಿಲ್ಲೆಯಲ್ಲಿ 2,18,891 ಮಂದಿ ಭಾಗವಹಿಸಿದ್ದು, ಅತೀ ಹೆಚ್ಚು, ಶೇ. 21 ಜನರ ಭಾಗವಹಿಸುವಿಕೆಯೊಂದಿಗೆ ಮುಂಚೂಣಿ ಜಿಲ್ಲೆ ಎಂಬ ಹೆಗ್ಗಳಿಕೆ ಪಾತ್ರವಾಯಿತು. ಉಡುಪಿ ಜಿಲ್ಲೆಯಲ್ಲಿ 234 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಿದ್ದು, ಇದು ಅತೀ ಉದ್ದದ ಮಾನವ ಸರಪಳಿ ಎಂಬ ಹೆಗ್ಗಳಿಕೆಗೆ ಪ್ರತ್ರವಾಗಿದೆ.