* ಸುಪ್ರೀಂ ಕೋರ್ಟ್‌ ನ ನಿವೃತ ನ್ಯಾಯಾಧೀಶ ಅಜಯ.ಮಾಣಿಕ್ ರಾವ್. ಖಾನ್ವಿಲ್ಕರ್ ಅವರು ಲೋಕಪಾಲ ಮುಖ್ಯಸ್ಥರಾಗಿ  ಮಾರ್ಚ್ 10 ರಂದು ಪ್ರಮಾಣ ವಚನ ಸ್ವೀಕರಿಸಿದರು. * ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಲೋಕಪಾಲ ಮುಖ್ಯಸ್ಥ ಖಾನ್ವಿಲ್ಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.* 66 ವರ್ಷದ ನಿವೃತ್ತ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮೇ 13, 2016 ರಿಂದ ಜುಲೈ 29, 2022 ರವರೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. * ಮೇ 27, 2022 ರಂದು ಪಿನಾಕಿ ಚಂದ್ರ ಘೋಸ್ ಅವರ ನಿವೃತ್ತಿಯ ಎರಡು ವರ್ಷಗಳ ನಂತರ ನಿವೃತ್ತ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಲೋಕಪಾಲ್‌ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.