* ರಾಜ್ಯ ವಿಧಾನಮಂಡಲ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.* ಮಾ. 3ರಂದು ಜಂಟಿ ಅಧಿವೇಶನ ನಡೆಯಲಿದ್ದು, ಅನಂತರದಿಂದ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಸೇರಿದಂತೆ ಇನ್ನಿತರ ಕಾರ್ಯ ಕಲಾಪ ನಡೆಯಲಿವೆ.* ಮಾ. 7ರಂದು ಹಣಕಾಸು ಖಾತೆ ಯನ್ನೂ ಹೊಂದಿರುವ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾ. 3ರಂದು ಆರಂಭವಾಗಲಿ ರುವ ಅಧಿವೇಶನವು ಮಾ. 21ರವರೆಗೆ ನಡೆಯಲಿದೆ.* ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾ.3ರಂದು ಬೆಳಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಭಾಷಣ ಮಾಡಲಿದ್ದಾರೆ.* ಮಾ.4, 5 ಹಾಗೂ 6ರಂದು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾ.10 ರಿಂದ 21ರವರೆಗೆ ಸದನದ ಕಾರ್ಯಕಲಾಪಗಳು ನಡೆಯಲಿವೆ.