* ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ 88 ವರ್ಷದ ರಾಮೋಜಿ ರಾವ್ ಅವರು ವಯೋಸಹಜ ಕಾಯಿಲೆಯಿಂದ ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.* ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.* ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮೋಜಿ ರಾವ್ ಅವರು ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು. * ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ.