* ಭಾರತ ಕಂಡ ಅಪ್ರತೀಮ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್ ಅವರು ನಿನ್ನೆ(ಡಿಸೆಂಬರ್ 26) ರಾತ್ರಿ 9.51ಕ್ಕೆ ತಮ್ಮ ಕೊನೆಯ ಉಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.* ಒಬ್ಬ ಭಾರತೀಯ ರಾಜಕಾರಣಿ, ಅರ್ಥಶಾಸ್ತ್ರಜ್ಞ, ಶಿಕ್ಷಣತಜ್ಞ ಮತ್ತು ಅಧಿಕಾರಿಯಾಗಿದ್ದು ಅವರು 2004ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿಯಾಗಿದ್ದಾರೆ.* ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದ ಸಿಂಗ್ ಭಾರತದ ಮೊದಲ ಸಿಖ್ ಪ್ರಧಾನಿಯಾಗಿದ್ದರು.* 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ.* 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.* ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದ್ದರು. * 1957ರಲ್ಲಿ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.* ಮನಮೋಹನ್ ಸಿಂಗ್ ಅವರ ಕೃತಿಯಾದ ಭಾರತದ ರಫ್ತು ಸ್ಥಿತಿ ಮತ್ತು ಸ್ವಾವಲಂಬಿ ಸುಸ್ಥಿರ ಪ್ರಗತಿಯಲ್ಲಿ ಅದರ ಭವಿಷ್ಯ “India’s Export Trends and Prospects for Self-Sustained Growth” [Clarendon Press, Oxford, 1964] ಭಾರತದ ಆಂತರಿಕ ಆಧಾರಿತ ವ್ಯಾಪಾರ ನೀತಿಯ ಆರಂಭಿಕ ವಿಮರ್ಶೆಯಾಗಿತ್ತು.* 1987ರಿಂದ 1990ರವರೆಗೆ ಅವರನ್ನು ಜೀನಿವಾದಲ್ಲಿನ ದಕ್ಷಿಣ ಆಯೋಗಕ್ಕೆ ಮಹಾಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.* ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್ 1991ರಿಂದ 1996ರವರೆಗೆ ಡಾ. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.* ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪದ್ಮವಿಭೂಷಣ (1987), ವರ್ಷದ ಹಣಕಾಸು ಸಚಿವರಿಗೆ ನೀಡುವ 'ಯೂರೊ ಮನಿ ಅವಾರ್ಡ್' (1993 ಮತ್ತು 1994), ಇಂಡಿಯನ್ ಸೈನ್ಸ್ ಕಾಂಗ್ರೆಸ್ ನೀಡುವ ಜವಾಹರಲಾಲ್ ನೆಹರೂ ಜನ್ಮ ಶತಮಾನೋತ್ಸವ ಪುರಸ್ಕಾರ (1995) ಈ ಪ್ರಶಸ್ತಿಗಳು ಸಿಂಗ್ ಅವರ ಪ್ರಮುಖ ಪ್ರಶಸ್ತಿಗಳಾಗಿವೆ.* ಮನಮೋಹನ ಸಿಂಗ್ ಅವರ ಸಾಧನೆಗಳು : - ಭಾರತದ 14 ಮತ್ತು 15ನೇ ಪ್ರಧಾನಿಯಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ. - 2004 ಮೇ 22 ರಿಂದ 2014 ಮೇ 26ರ ರವರೆಗೆ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.- ಪ್ರಧಾನಿ ಹುದ್ದೆ ಅಲಂಕರಿಸಿದ ಸಿಖ್ ಸಮುದಾಯದ ಮೊದಲ ನಾಯಕ- ಲೋಕಸಭೆ ಚುನಾವಣೆಗೆ ನಿಲ್ಲದೆಯೇ 5 ಬಾರಿ ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ- 2008ರಲ್ಲಿ 'ರಾಷ್ಟ್ರೀಯ ತನಿಖಾ ಸಂಸ್ಥೆ'ಯನ್ನು (ಎನ್ಐಎ) ಸ್ಥಾಪಿಸಿದರು.- 1987ರಲ್ಲಿ ಪದ್ಮ ವಿಭೂಷಣ, ಹತ್ತಾರು ವಿವಿಗಳಿಂದ ಡಾಕ್ಟರೇಟ್ ಪಡೆದ ಆರ್ಥಿಕ ನಿಪುಣ- ನೆಹರೂ ಬಳಿಕ ಮೊದಲ ಪೂರ್ಣಾವಧಿ ಪೂರೈಸಿ ಮರು ಆಯ್ಕೆಯಾದ ಪ್ರಧಾನಿ ಎಂಬ ಹೆಗ್ಗಳಿಕೆ- 1971ರಲ್ಲಿ ವಾಣಿಜ್ಯ ಸಚಿವಾಲಯದ ಆರ್ಥಿಕ ಸಲಹೆಗಾರರಾಗಿ ಮೊದಲ ಬಾರಿಗೆ ಸರಕಾರದ ಭಾಗವಾದರು- 1982-85: ರಿಸರ್ವ್ ಬ್ಯಾಂಕ್ನ ಗವರ್ನರ್ ಆಗಿ ಸೇವೆ ಸಲ್ಲಿಸಿದರು- 1991-1996 ರ ವರೆಗೆ ವಿತ್ತ ಸಚಿವರಾಗಿ ಉದಾರೀಕರಣ, ಜಾಗತೀಕರಣ ಮತ್ತು 'ಖಾಸಗೀಕರಣ ಸೇರಿದಂತೆ ಮಹತ್ವದ ಆರ್ಥಿಕ ನೀತಿಗಳಿಗೆ ಕಾರಣೀಭೂತರಾದರು.- ಮನರೇಗಾ, ಆಹಾರ ಭದ್ರತಾ ಕಾಯಿದೆ, ಆಧಾರ್, ಆರ್ಟಿಐ ಸೇರಿದಂತೆ ಹಲವು ಜನಪರ ಯೋಜನೆಗಳ ಹರಿಕಾರರಾಗಿದ್ದಾರೆ.