* ಬಿಜೆಪಿ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತರತ್ನ ಪ್ರಶಸ್ತಿಯನ್ನು ಘೋಷಿಸಿದ್ದಾರೆ.* ಎಲ್.ಕೆ. ಅಡ್ವಾಣಿ ಅವರು ರಾಷ್ಟ್ರವನ್ನು ಬಲಪಡಿಸಿದ ಸ್ಮರಣೀಯ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಗೆ ದಾರಿದೀಪವಾಗಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ” ಎಂದು ಹೇಳಿದ್ದಾರೆ.* ಕರಾಚಿಯಲ್ಲಿ 1927 ನ.8ರಂದು ಜನಿಸಿದ ಆಡ್ವಾಣಿ. 1970 ರಿಂದ 2019ರವರೆಗೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದು, ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದು, 3 ಬಾರಿ ಪಕ್ಷದ ಅಧ್ಯಕ್ಷರಾಗಿದ್ದಾರೆ. * ರಾಮ ಜನ್ಮಭೂಮಿಗಾಗಿ 1990ರಲ್ಲಿ ದೇಶದ ಉದ್ದಗಲಕ್ಕೂ ರಥಯಾತ್ರೆ ನಡೆಸಿ ಬಿಜಿಪಿಯ ಬೆಳವಣಿಗೆಗೆ ತಳಪಾಯ ಹಾಕಿದ್ದಾರೆ.* ಮೋದಿಯವರು ಮಾತನಾಡಿ ನಮ್ಮ ಕಾಲದ ಅತ್ಯಂತ ಆದರಣೀಯ ಆಡಳಿತಗಾರರಲ್ಲಿ ಒಬ್ಬರಾದ ಎಲ್‌. ಕೆ.ಆಡ್ವಾಣಿ ಅವರು, ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಚಿರಸ್ಥಾಯಿಯಾಗಿದೆ. ಗೃಹ ಸಚಿವರಾಗಿ ಪ್ರಸಿದ್ಧಿ ಪಡೆದಿದ್ದಾರೆ. ಅವರ ಸಂಸದೀಯ ಪಾಲ್ಗೊಳ್ಳುವಿಕೆ ಆದರ್ಶವಾಗಿದೆ. ಅವರಿಗೆ ಭಾರತ ರತ್ನ ಘೋಷಿಸಿದ್ದು, ನನಗೆ ಭಾವನಾತ್ಮಕ ಕ್ಷಣ ಎಂದು ತಿಳಿಸಿದ್ದಾರೆ.  * ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು 1954ರಲ್ಲಿ ಸ್ಥಾಪಿಸಲಾಗಿದ್ದು, ಅದೇ ವರ್ಷ ಸಿ.ರಾಜಗೋಪಾಲಚಾರಿ, ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸಿವಿ ರಾಮನ್ ಅವರಿಗೆ ಪ್ರದಾನ ಮಾಡಲಾಯಿತು. 2014ರಿಂದ ಇಚೇಗೆ ಸಚಿನ್ ತೆಂಡೂಲ್ಕರ್, ಅಟಲ್ ಬಿಹಾರಿ ವಾಜಪೇಯಿ, ಪ್ರಣಬ್ ಮುಖರ್ಜಿ, ನಾನಾಜಿ ದೇಶಮುಖ್, ಭೂಪೇನ್ ಹಜಾರಿಕಾ ಅವರಿಗೆ ಪ್ರದಾನ ಮಾಡಲಾಗಿದ್ದು 2024ರಲ್ಲಿ ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂ‌ರ್ ಹಾಗೂ ಮಾಜಿ ಉಪಪ್ರಧಾನಿ ಆಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಲಾಗಿದೆ. ಇದುವರೆಗೂ 50 ಗಣ್ಯರು ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.