* ಮಾಲ್ಮೀವ್‌ಗೆ ಅಗತ್ಯ ವಸ್ತುಗಳನ್ನು ಪೂರೈಸಲು ಅನುಕೂಲವಾಗುವಂತೆ ಭಾರತ ಸರ್ಕಾರವು ಶುಕ್ರವಾರ(ಏಪ್ರಿಲ್ 5) ರಪ್ತು ನಿರ್ಬಂಧಗಳನ್ನು ತೆಗೆದುಹಾಕುವಂತೆ ನಿರ್ಧಾರ ತೆಗೆದುಕೊಂಡಿದೆ.* 2024-25ನೇ ಸಾಲಿನ ದ್ವಿಪಕ್ಷೀಯ ಒಪ್ಪಂದದ ಅನ್ವಯ ಭಾರತ ಸರ್ಕಾರ ಈ ತೀರ್ಮಾನವನ್ನು ಕೈಗೊಂಡಿದೆ. * ಮೊಟ್ಟೆ, ಆಲೂಗೆಡ್ಡೆ, ಈರುಳ್ಳಿ, ಅಕ್ಕಿ, ಗೋಧಿ ಹಿಟ್ಟು, ಸಕ್ಕರೆ, ಬೇಳೆ ಹಾಗೂ ಮರಳನ್ನು ಪೂರೈಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಧೀನದಲ್ಲಿ ಬರುವ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (ಡಿಜಿಎಫ್‌ಟಿ) ಯು ತಿಳಿಸಿದೆ.* ಮಾಲ್ಡಿವ್ಸನ ಆಹಾರ ವಸ್ತುಗಳ ರಪ್ತು ಕೋಟಾವನ್ನು ಶೇ 5 % ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.