* ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ವಾರ್ಷಿಕವಾಗಿ ಮಾರ್ಚ್ 15 ರಂದು ಆಚರಿಸಲಾಗುತ್ತದೆ, ಇದು ಗ್ರಾಹಕರ ಹಕ್ಕುಗಳು ಮತ್ತು ರಕ್ಷಣೆಯನ್ನು ಎತ್ತಿಹಿಡಿಯುವ ಅಗತ್ಯತೆಯ ಅಗತ್ಯ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. * ಎಲ್ಲಾ ಗ್ರಾಹಕರ ಮೂಲಭೂತ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಆ ಹಕ್ಕುಗಳನ್ನು ಗೌರವಿಸಲು ಮತ್ತು ರಕ್ಷಿಸಲು ಪ್ರೋತ್ಸಾಹಿಸಲು ದಿನವು ಒಂದು ಅವಕಾಶವಾಗಿದೆ.* 2025 ರ ವಿಶ್ವ ಗ್ರಾಹಕ ಹಕ್ಕುಗಳ ದಿನದ ಧ್ಯೇಯವಾಕ್ಯ "ಸುಸ್ಥಿರ ಜೀವನಶೈಲಿಗೆ ನ್ಯಾಯಯುತ ಪರಿವರ್ತನೆ" ಎಂಬುವುದಾಗಿದೆ. * ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಪ್ರತಿ ವರ್ಷ ಒಂದೊಂದು ಥೀಮ್ ನೊಂದಿಗೆ ಜಾಗತಿಕವಾಗಿ ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.* 1983ರಲ್ಲಿ ಮೊದಲ ಬಾರಿಗೆ ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಮಾರ್ಚ್ 15ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. 1962ರ ಮಾರ್ಚ್ 15ರಂದು ಅಂದಿನ ಅಮೆರಿಕ ಅಧ್ಯಕ್ಷ ಜಾನ್ ಎಫ್.ಕೆನಡಿ ಯುಎಸ್ ಕಾಂಗ್ರೆಸ್‌ಗೆ ವಿಶೇಷ ಹಕ್ಕುಗಳ ಸಮಸ್ಯೆಯ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಈ ಮೂಲಕ ಗ್ರಾಹಕರ ಹಕ್ಕುಗಳ ವಿಷಯದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಮೊದಲ ವಿಶ್ವನಾಯಕರಾಗಿ ಜಾನ್ ಎಫ್.ಕೆನಡಿ ಅವರು ಗುರುತಿಸಿಕೊಂಡರು.* 1986 ಡಿಸೆಂಬರ್ 24 ರಂದು ಭಾರತದಲ್ಲಿ ಗ್ರಾಹಕರ ಹಕ್ಕುಗಳ ದಿನವನ್ನು ಅಧಿಕೃತವಾಗಿ ಆಚರಣೆ ಮಾಡಲಾಯಿತು ಅಂದಿನಿಂದ ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 24 ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನಾಗಿ ಆಚರಿಸಲಾಗುತ್ತದೆ.