* ಭಾರತದಲ್ಲಿ ರಾಷ್ಟ್ರೀಯ ಲಸಿಕೆ ದಿನವನ್ನು ಪ್ರತಿ ವರ್ಷ ಮಾರ್ಚ್ 16 ರಂದು ಆಚರಿಸಲಾಗುತ್ತದೆ. * 2025ರ ರಾಷ್ಟ್ರೀಯ ಲಸಿಕಾ ದಿನದ ಥೀಮ್ ಅನ್ನು ಇನ್ನು ನಿಗದಿಪಡಿಸಿಲ್ಲ.* ದೇಶದಲ್ಲಿ ಮೊದಲ ಲಸಿಕೆ ದಿನಾಚರಣೆ ನಡೆದದ್ದು 1995ರ ಮಾರ್ಚ್ 16ರಂದು. ಅಂದು ದೇಶದಲ್ಲಿ ಪೋಲಿಯೊ ಹನಿ ಹಾಕುವ 'ಪಲ್ಸ್ ಪೋಲಿಯೊ' ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಎರಡು ದಶಕಗಳ ಬಳಿಕ ದೇಶದಲ್ಲಿ ಕ್ರಮೇಣ ಪೋಲಿಯೊ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ, 2014ರಲ್ಲಿ ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು.* ಸಕಾಲದಲ್ಲಿ ಲಸಿಕೆ ಹಾಕಿಸುವುದರಿಂದ ಪ್ರತಿ ವರ್ಷ ಲಕ್ಷಾಂತರ ಮಕ್ಕಳು ಸಾವಿನಿಂದ ಪಾರಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ಮಾಹಿತಿ ನೀಡಿದೆ. 20-30 ಲಕ್ಷ ಮಕ್ಕಳ ಜೀವ ಜಾಗತಿಕವಾಗಿ ಪ್ರತಿವರ್ಷ ಉಳಿಯುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. * ಮುಂಚೂಣಿಯ ಆರೋಗ್ಯ ಕಾರ್ಯಕರ್ತರ ಕಠಿಣ ಪರಿಶ್ರಮವನ್ನು ಗುರುತಿಸಿ ಪ್ರಶಂಸಿಸಲು ಮತ್ತು ಪ್ರತಿ ಮಗುವಿಗೆ ಲಸಿಕೆ ನೀಡುವುದನ್ನು ಖಚಿತಪಡಿಸಿಕೊಳ್ಳಲು, ಪ್ರತಿ ವರ್ಷ ಮಾರ್ಚ್ 16 ಅನ್ನು ರಾಷ್ಟ್ರೀಯ ಲಸಿಕೆ ದಿನವನ್ನಾಗಿ ಆಚರಿಸಲಾಗುತ್ತದೆ.* ವಿಶ್ವ ರೋಗನಿರೋಧಕ ವಾರ 2025 ಅನ್ನು ಏಪ್ರಿಲ್ 24 ರಿಂದ ಏಪ್ರಿಲ್ 30 ರವರೆಗೆ ಆಚರಿಸಲಾಗುತ್ತದೆ, ಇದು ರೋಗಗಳನ್ನು ತಡೆಗಟ್ಟುವಲ್ಲಿ ಲಸಿಕೆಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ.