Job Description: * ಪ್ರತಿ ವರ್ಷ ಮಾರ್ಚ್ 20 ರಂದು ವಿಶ್ವದಾದ್ಯಂತ ವಿಶ್ವ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಗುತದೆ. ಜಗತ್ತಿನಲ್ಲಿ ಗುಬ್ಬಚ್ಚಿಗಳ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ.* ಗುಬ್ಬಚ್ಚಿ ದಿನವನ್ನು ಪ್ರತಿ ವರ್ಷ ಒಂದು ಥೀಮ್ ನೊಂದಿಗೆ ಆಚರಿಸಲಾಗುತ್ತದೆ. 2023 ಗುಬ್ಬಚ್ಚಿ ದಿನದ ಥೀಮ್ I Love Sparrows. * ಗುಬ್ಬಚ್ಚಿ ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ.* ಭಾರತದ ನೇಚರ್ ಫಾರೆವರ್ ಸೊಸೈಟಿಯ ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ, ಫ್ರಾನ್ಸಿನ ಇಕೋ-ಸಿಸ್ ಆಕ್ಷನ್ ಫೌಂಡೆಶನ್ ಮತ್ತು ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ. ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.