Job Description: * ಪ್ರತಿ ವರ್ಷ ಮಾರ್ಚ್ 22ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷವೂ ಒಂದು ಘೋಷವಾಕ್ಯ ದೊಂದಿಗೆ ಈ ಜಲ ದಿನವನ್ನು ಆಚರಿಸಲಾಗುತ್ತದೆ. 2023ರ ವಿಶ್ವ ಜಲ ದಿನದ ಘೋಷವಾಕ್ಯ : ಈ ವರ್ಷ ವಿಶ್ವ ಜಲ ದಿನದ ವಿಷಯವು 'ನೀರು ಮತ್ತು ನೈರ್ಮಲ್ಯ ಬಿಕ್ಕಟ್ಟನ್ನು ಪರಿಹರಿಸಲು ಬದಲಾವಣೆಯನ್ನು ವೇಗಗೊಳಿಸುವುದು'.* ಸಿಹಿನೀರಿನ ಸಂಪನ್ಮೂಲಗಳನ್ನು ಸುಸ್ಥಿರವಾಗಿ ನಿರ್ವಹಿಸಲು ಮತ್ತು ನೀರಿನ ಮಾಲಿನ್ಯ, ನೀರಿನ ಕೊರತೆ, ಅಸಮರ್ಪಕ ನೀರು ಮತ್ತು ನೈರ್ಮಲ್ಯದ ಕೊರತೆಯಂತಹ ಜಲ ಸಂಬಂಧಿತ ಸಮಸ್ಯೆಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಜನರನ್ನು ಜಾಗೃತಗೊಳಿಸುವುದು ಮತ್ತು ಪ್ರೇರೇಪಿಸುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿದೆ.* ನೀರಿನ ಮಹತ್ವವನ್ನು ಜಗತ್ತಿಗೆ ತಿಳಿಸಲು ಮತ್ತು ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಯನ್ನುಮೂಡಿಸಲು, ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ.