* ಜಗತ್ತಿನಾದ್ಯಂತ ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.* 2024ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಥೀಮ್ "ಒಳಗೊಳ್ಳುವುದರಲ್ಲಿದೆ ಸ್ಫೂರ್ತಿ" (Inspire Inclusion).* ಮಹಿಳಾ ದಿನಾಚರಣೆ ಮೂಲಕ ಲಿಂಗ ಸಮಾನತೆ ರೂಪಿಸುವಲ್ಲಿ ಪ್ರತಿಯೊಬ್ಬರ ಪಾತ್ರವಿದೆ ಎಂಬ ಅಂಶವನ್ನು ಬಲವಾಗಿ ಸಾರಲು ಈ ದಿನ ಒಂದು ದೊಡ್ಡ ವೇದಿಕೆ ಆಗಿರುತ್ತದೆ. * ನಂತರ 1910 ರಲ್ಲಿ ಕೋಪನ್ ಹ್ಯಾಗನ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ಸಮ್ಮೇಳನದಲ್ಲಿ ಕ್ಲಾರಾ ಜೆಟ್ಕಿನ್ ಅವರು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಪ್ರಸ್ತಾಪಿಸಿದರು. ಈ ಕಲ್ಪನೆಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟಿತು. 1911 ರಲ್ಲಿ ಹಲವಾರು ಯುರೋಪಿಯನ್ ರಾಷ್ಟ್ರಗಳಲ್ಲಿ ಮೊದಲ ಆಚರಣೆಗೆ ಕಾರಣವಾಯಿತು. ಅಂದಿನಿಂದ ಜಗತ್ತಿನಾದ್ಯಂತ ಮಾರ್ಚ್ 8 ಅನ್ನು ಮಹಿಳಾ ದಿನವನ್ನು ಆಚರಿಸಲಾಗುತ್ತದೆ.* ಮಹಿಳಾ ದಿನದ ಮಹತ್ವ: ಅಂತಾರಾಷ್ಟ್ರೀಯ ಮಹಿಳಾ ದಿನವು ಲಿಂಗ ಸಮಾನತೆ ಮತ್ತು ಮಹಿಳಾ ಹಕ್ಕುಗಳ ಕುರಿತಾಗಿ ಹೆಚ್ಚು ಮಹತ್ವ ಹೊಂದಿದೆ. ವಿಶ್ವಾದ್ಯಂತ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಇದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ* ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಲು ಖಂಡಿತಾ ಸಾಧ್ಯವಿಲ್ಲ. ಯಾಕೆಂದರೆ, ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಇದೇ ಕಾರಣಕ್ಕೆ ಹೆಣ್ಣಿಗೆ ಒಂದು ದಿನ ಮೀಸಲಿಟ್ಟು ಆಕೆಯ ಶ್ರಮ, ನಿಸ್ವಾರ್ಥ ಕೆಲಸವನ್ನು ಗೌರವಿಸಲಾಗುತ್ತದೆ.