* ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಮಾರಿಷಸ್ ತಲುಪಿದ್ದು, ಈ ಸಂದರ್ಭದಲ್ಲಿ ಅವರು ಸಾಮರ್ಥ್ಯ ವೃದ್ಧಿ ಪ್ರಸ್ತಾವನೆಯಿಂದ ಆರಂಭಿಸಿ, ಸಮುದಾಯ ಸಂಬಂಧಿತ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳವರೆಗೆ 20ಕ್ಕೂ ಹೆಚ್ಚು ಭಾರತ ಬೆಂಬಲಿತ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.* ಆಗ್ನೇಯ ಆಫ್ರಿಕಾದ ದ್ವೀಪ ರಾಷ್ಟ್ರವಾದ ಮಾರಿಷಸ್ ನಲ್ಲಿ ನೂತನ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಲಿದ್ದಾರೆ.* ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾರಿಷಸ್ ನ ಪ್ರಧಾನಿ ನವೀನ್ ರಾಮ್ ಗೂಲಮ್ ಅವರೊಂದಿಗೆ ನಾಗರಿಕ ಸೇವೆ ಕಾಲೇಜು ಕಟ್ಟಡವನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.* ಈ ಕಟ್ಟಡವು ಅಂದಾಜು 4.75 ದಶಲಕ್ಷ ಅಮೆರಿಕನ್ ಡಾಲರ್ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 2017ರಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಉಭಯ ದೇಶಗಳು ಸಹಿ ಮಾಡಿದ್ದವು.