* ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದೆ.* ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. * ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು.- ಪ್ರಥಮ ಸ್ಥಾನ – ಮಂಡ್ಯ (ರಂಗನತಿಟ್ಟು ಪಕ್ಷಿಧಾಮ ಹಾಗೂ ಕೆಆರ್‌ಎಸ್‌ ಅಣೆಕಟ್ಟು)- ದ್ವಿತೀಯ ಸ್ಥಾನ – ಧಾರವಾಡ (ಇಸ್ರೊ ಗಗನಯಾನದಲ್ಲಿ ಹಣ್ಣಿನ ನೊಣಗಳು)- ತೃತೀಯ ಸ್ಥಾನ – ಚಾಮರಾಜನಗರ (ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು)* ಇಲಾಖೆ, ನಿಗಮ ಹಾಗೂ ಮಂಡಳಿಗಳ ವಿಭಾಗ- ಪ್ರಥಮ – ವಾರ್ತಾ ಇಲಾಖೆ (ವಿಶ್ವಗುರು ಬಸವಣ್ಣ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ)- ದ್ವಿತೀಯ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆ ಸಾಧಿಸುವುದು)- ತೃತೀಯ – ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಮೈಸೂರು ಸ್ಯಾಂಡಲ್‌ವುಡ್‌ ಸೋಪು ಕಿರು ಪರಿಚಯ)