* 2025ರ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.* ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರಿದ್ದ ಪೀಠ, ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿಯಿತು.* ಒಬ್ಬ ವ್ಯಕ್ತಿ ಬೇರೆ ಧರ್ಮದ ಹಬ್ಬದಲ್ಲಿ ಭಾಗವಹಿಸಿದರೂ ಸಂವಿಧಾನಬದ್ಧ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ ಎಂದು ಕೋರ್ಟ್ ತಿಳಿಸಿತು.* ಅರ್ಜಿದಾರರಾದ ಎಚ್.ಎಸ್. ಗೌರವ್ ಪರ ವಕೀಲರು, ದಸರಾ ಉದ್ಘಾಟನೆಯಲ್ಲಿ ನಡೆಯುವ ದೀಪ ಬೆಳಗಿಸುವುದು, ಪೂಜೆ ಮುಂತಾದವು ಧಾರ್ಮಿಕ ಆಚರಣೆಗಳಾಗಿವೆ. ಇವುಗಳಿಗೆ ಹಿಂದೂಯೇತರರನ್ನು ಆಹ್ವಾನಿಸುವುದು ಸರಿಯಲ್ಲ, ಇದನ್ನು ರಾಜಕೀಯ ಕಾರಣಕ್ಕಾಗಿ ಮಾಡಲಾಗಿದೆ ಎಂದು ವಾದಿಸಿದರು.* ಸಂವಿಧಾನದ 25ನೇ ವಿಧಿ ಅಡಿಯಲ್ಲಿ ಧಾರ್ಮಿಕ ಆಚರಣೆಗಳು ರಕ್ಷಿಸಲ್ಪಟ್ಟಿದ್ದರೂ, ಅರ್ಜಿದಾರರು ಯಾವುದೇ ಕಾನೂನು ಅಥವಾ ಸಂವಿಧಾನ ಉಲ್ಲಂಘನೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತು.* ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.