* ಮಧ್ಯಪ್ರದೇಶ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಒಬಿಸಿ ನಾಯಕ ಹಾಗೂ ಉಜ್ಜೈನಿ ಶಾಸಕ ಮೋಹನ್‌ ಯಾದವ್‌ ಅವರು ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಹೊಸ ವಿಧಾನಸಭಾ ಸ್ಪೀಕರ್ ಆಗಿ ನರೇಂದ್ರ ಸಿಂಗ್ ತೋಮರ್ ಅವರನ್ನು ಹೆಸರಿಸಲಾಗಿದೆ. *  ನಿರ್ಗಮಿತ ಹಣಕಾಸು ಸಚಿವ ಜಗದೀಶ್ ದೇವದಾ ಮತ್ತು ನಿರ್ಗಮಿತ ಸಾರ್ವಜನಿಕ ಸಂಪರ್ಕ ಸಚಿವ ಶಾಸಕ ರಾಜೇಂದ್ರ ಶುಕ್ಲಾ ಅವರು ಮಧ್ಯಪ್ರದೇಶದ ನೂತನ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದಾರೆ. * ಯಾದವ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ನಿಮ್ಮ ಪ್ರೀತಿ ಮತ್ತು ಬೆಂಬಲದೊಂದಿಗೆ ನಾನು ನನ್ನ ಜವಾಬ್ದಾರಿಗಳನ್ನು ಪೂರೈಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.* ಮೋಹನ್ ಯಾದವ್ ಅವರನ್ನು ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್‌ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಭಿನಂದಿಸಿದ್ದಾರೆ. * ಮೋಹನ್ ಅವರು 2013, 2018, 2023ರ ಚುನಾವಣೆಯಲ್ಲಿಉಜ್ಜಯನಿ ಕ್ಷೇತ್ರದಿಂದ ಸ್ಪರ್ಧಿಸಿ ಹ್ಯಾಟ್ರಿಕ್‌ ಗೆಲುವು ಸಾಧಿದಿದ್ದಾರೆ, ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲದೊಂದಿಗೆ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.